*ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿಗಿಸಿ,* *ಶಾಸಕ ಸಿಮೆಂಟ್ ಮಂಜುನಾಥ್*

ಸಕಲೇಶಪುರ : ತಾಲೂಕಿನಲ್ಲಿ ಸಂಪೂರ್ಣ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಸಲುವಾಗಿ ಆಲೂರು ಕಟ್ಟಾಯ ಸಕಲೇಶಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುನಾಥ್ ಸಮ್ಮುಖದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆ ಕರೆಯಲಾಗಿತ್ತು , ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಟಾಸ್ಕ್ ಫೋರ್ಸ್ ಸಭೆ ನಡೆಸಿ, ಕೂಡಲೇ ಕುಡಿಯುವ ನೀರಿನ ಸಮಸ್ಯೆ ಇದ್ದ ಕಡೆ ಕೊಳವೆಬಾವಿ ಕಾಮಗಾರಿ ಕೈಗೊಳ್ಳುವ ಬಗ್ಗೆ ಚರ್ಚಿಸಿ , ಹಾಗೂ ಕೆಇಬಿ ಸಂಪರ್ಕ ಕಲ್ಪಿಸುವಬಗ್ಗೆ , ಕೆಇಬಿ ಅಧಿಕಾರಿಗಳು,ಅರಣ್ಯ ಇಲಾಖೆ ಅಧಿಕಾರಿಗಳುಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಶಾಸಕರು ಕಡಕ್ ಸೂಚನೆ ನೀಡಿರುತ್ತಾರೆ.ಈ ಸಂದರ್ಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಾದ ಗಂಗಾಧರ್ , ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಹರೀಶ್. ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!