

ಬೇಲೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಸಿರು ಭೂಮಿ ಪ್ರತಿಷ್ಠಾನ ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಕನ್ನಡ ಸಾಹಿತ್ಯ ಪರಿಷತ್ ಗ್ರೀನರಿ ಟ್ರಸ್ಟ್ ಬೇಲೂರು ಪುರಸಭೆ . ಇವರ ಸಂಯುಕ್ತ ಆಶ್ರಯದಲ್ಲಿ ಸುರಪುರ ಬಳಿ ಇರುವ ಬೇಲೂರು ಪುರಸಭೆಯ ಕುಡಿಯುವ ನೀರಿನ ಶುದ್ಧೀಕರಣ ಘಟಕದ ಆವರಣದಲ್ಲಿ ಸಸಿ ಗಳು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ . ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷ ಶ್ರೀಮತಿ ತೀರ್ಥಕುಮಾರಿ ಎಂ ಆರ್ ವೆಂಕಟೇಶ್ ರವರು ವಿಶ್ವ ಪರಿಸರ ದಿನಾಚರಣೆಯ ಅರ್ಥ ಹಾಗೂ ಮಹತ್ವವನ್ನು ವಿವರಿಸಿದರು. ಪರಿಸರವು ಮಾನವ ಜೀವನದ ಮೂಲಾಧಾರವಾಗಿದ್ದು, ಜೀವ ಸಂಕುಲದ ಅಸ್ತಿತ್ವಕ್ಕೆ ಅವಶ್ಯಕವಾದ ಗಾಳಿ, ನೀರು, ಮಣ್ಣು ಹಾಗೂ ಪ್ರಕೃತಿ ಸಂಪನ್ಮೂಲಗಳನ್ನು ಒದಗಿಸುತ್ತದೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪರಿಸರವನ್ನು ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ನೀಡಬಹುದು ಎಂದು ಹೇಳಿದರು. ವಿಶ್ವ ಪರಿಸರ ದಿನಾಚರಣೆಯು ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮಹತ್ವದ ದಿನವಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದರ ಆರೈಕೆ ಮಾಡುವ ಸಂಕಲ್ಪ ಕೈಗೊಳ್ಳಬೇಕು ಮತ್ತು ಪರಿಸರ ಸಂರಕ್ಷಣೆ ನಮ್ಮೆಲ್ಲರ ಇತ್ತೀಚಿನ ದಿನಗಳಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ಬೆಳೆದು ನಿಂತ ಬೃಹತ್ ಗಾತ್ರದಮರಗಳನ್ನು ಮಾರಣಹೋಮ ನಡೆಯುತ್ತಿದ್ದು ಇದರ ಬಗ್ಗೆ ಸರ್ಕಾರ ಗಮನಹರಿಸಿ ಅಗತ್ಯವಿದ್ದಲ್ಲಿ ಮಾತ್ರ. ತೆರೆವು ಗೊಳಿಸಿ ಒಂದು ಮರಕ್ಕೆ ಕನಿಷ್ಠ 10 ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಸಾಹಿತ್ ಪರಿಷತ್ ಅಧ್ಯಕ್ಷ ಮಾನ ಮಂಜೇಗೌಡ ರವರು ಮಾತನಾಡಿ, ಆಧುನಿಕ ಯುಗದಲ್ಲಿ ಪರಿಸರದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಿದರು. ಮಾನವನ ಆರೋಗ್ಯ, ಕೃಷಿ, ಪಶುಸಂಗೋಪನೆ ಹಾಗೂ ಜೀವನದ ಸಮಗ್ರ ವ್ಯವಸ್ಥೆ ಪರಿಸರದ ಮೇಲೆ ಅವಲಂಬಿತವಾಗಿದೆ. ಶುದ್ಧ ಪರಿಸರವಿಲ್ಲದೆ ಆರೋಗ್ಯಕರ ಜೀವನ ಸಾಧ್ಯವಿಲ್ಲ. ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಪರಿಸರದ ಮಹತ್ವವನ್ನು ಜಗತ್ತಿನಾದ್ಯಂತ ಜನರು ಅರಿತುಕೊಂಡರು. ಶುದ್ಧ ಗಾಳಿ, ಸ್ವಚ್ಛತೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮಾನವ ಬದುಕಿಗೆ ಎಷ್ಟು ಅವಶ್ಯಕ ಎಂಬುದನ್ನು ಆ ಸಂದರ್ಭ ಸ್ಪಷ್ಟಪಡಿಸಿತು ಎಂದು ಹೇಳಿದರು. ಬಳಿಕ ಮಾತನಾಡಿದ ಪುರಸಭಾ ಮಾಜಿ ಉಪಾಧ್ಯಕ್ಷಸೌಮ್ಯ ಸುಬ್ರಮಣ್ಯ.ಮಾತನಾಡಿ, ಪರಿಸರ ಸಂರಕ್ಷಣೆಯ ಉದ್ದೇಶ, ಮಹತ್ವ ಹಾಗೂ ಗುರಿಗಳ ಕುರಿತು ವಿವರಿಸಿದರು. ಅರಣ್ಯಗಳ ಸಂರಕ್ಷಣೆ, ಜೀವ ವೈವಿಧ್ಯದ ಉಳಿವು, ಜಲ ಸಂಪನ್ಮೂಲಗಳ ರಕ್ಷಣೆ ಹಾಗೂ ಮಾಲಿನ್ಯ ನಿಯಂತ್ರಣವು ಪರಿಸರ ಸಂರಕ್ಷಣೆಯ ಪ್ರಮುಖ ಗುರಿಗಳಾಗಿವೆ. ಪರಿಸರದಿಂದ ಮಾನವ ಕುಲಕ್ಕೆ ಅನೇಕ ಪ್ರಯೋಜನಗಳು ದೊರೆಯುತ್ತಿದ್ದು, ಪ್ರಕೃತಿಯ ಸಮತೋಲನ ಕಾಪಾಡಿದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ. ಭಾರತೀಯ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾಧ್ಯಕ್ಷೆ ಸೌಭಾಗ್ಯ ಮಾತನಾಡಿ, ಪರಿಸರದಿಂದ ಮಾನವನಿಗೆ ಆಗುವ ಅನುಕೂಲತೆಗಳ ಬಗ್ಗೆ ವಿವರಿಸಿದರು. ಪರಿಸರವು ನಮಗೆ ಶುದ್ಧ ಗಾಳಿ, ಕುಡಿಯುವ ನೀರು, ಆಹಾರ, ಔಷಧೀಯ ಸಸ್ಯಗಳು ಹಾಗೂ ಜೀವನಕ್ಕೆ ಅಗತ್ಯವಾದ ಅನೇಕ ಸಂಪನ್ಮೂಲಗಳನ್ನು ಒದಗಿಸುತ್ತದೆ. ಹಸಿರು ಪರಿಸರ ಮಾನವನ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.ನಂತರ ಮಾತನಾಡಿದ. ದಿವಂಗತ ಪರಿಸರ ಪ್ರೇಮಿ.ನಾಗರಾಜ್ ರವರ ಪತ್ನಿ ಲಾವಣ್ಯ ತಮ್ಮ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು . ನಮ್ಮ ಪತಿ ಹಾಕಿ ಕೊಟ್ಟ ಮಾರ್ಗದಲ್ಲಿ ನಮ್ಮ ಕುಟುಂಬ ಪರಿಸರ ಸಂರಕ್ಷಣೆಗಾಗಿ ದುಡಿಯುತ್ತಿದ್ದು ಬೇಲೂರು ಪಟ್ಟಣದಲ್ಲಿ. ನಿರಂತರವಾಗಿ ಗಿಡ ಸಸಿಗಳನ್ನು ಬೆಳೆಸುತ್ತಿದ್ದು ನಮ್ಮ ಗ್ರೀನರಿ ಟ್ರಸ್ಟ್ ಸಹಯೋಗದೊಂದಿಗೆ ನಮ್ಮ ಉತ್ತಮ ಕಾರ್ಯ ಚಾಲ್ತಿಯಲ್ಲಿದೆ ಎಂದು ತಿಳಿಸಿದರು. ಶಿಕ್ಷಕ ಸಂಪತ್ ಮಾತನಾಡಿಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಹೊಂದಿ ತಮ್ಮ ಕುಟುಂಬ ಹಾಗೂ ಸಮಾಜದಲ್ಲಿಯೂ ಹಸಿರು ಪರಿಸರ ನಿರ್ಮಾಣಕ್ಕೆ ಪ್ರೇರಣೆ ನೀಡಬೇಕು ಎಂದು ಹೇಳಿದರು.ನಂತರ ಮಾತನಾಡಿದ ಹಸಿರು ಭೂಮಿ ಪ್ರತಿಷ್ಠಾನ ಕಾರ್ಯದರ್ಶಿ ನೂರ್ ಅಹಮದ್ ಮಾತನಾಡಿ, ಪರಿಸರ ಸಂರಕ್ಷಣೆ ಭಾರತ ಪ್ರಜಾಪ್ರಭುತ್ವದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು. ಪರಿಸರವನ್ನು ರಕ್ಷಿಸುವ ಮೂಲಕ ದೇಶದ ಅಭಿವೃದ್ಧಿ ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು. ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು ಈ ಸಂದರ್ಭದಲ್ಲಿ. ಅಂತೋನಿ ಪುರಸಭೆಯ ನೌಕರರಾದ ವಿಶ್ವ ಪತ್ರಕರ್ತ ರವಿ. ದೇವರಾಜ್ .ಜೈ ಸೂರ್ಯ ಹಾಗೂ ಪರಿಸರ ಪ್ರೇಮಿಗಳು ಹಾಜರಿದ್ದರು
