**ಅಕ್ರಮವಾಗಿ ಸಾಗಿಸುತ್ತಿದ್ದ ಹವಳಿಗೆ ಬಿಲ್ಲೆಟ್ಸ್ ಮರ ಅರಣ್ಯ ಅಧಿಕಾರಿಗಳ ವಶಕ್ಕೆ*

ಸಕಲೇಶಪುರ : ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಖಚಿತ ಮಾಹಿತಿ ಆಧರಿಸಿ ಸಿಬ್ಬಂದಿಗಳೊಂದಿಗೆ ಮಿಂಚಿನ ಕಾರ್ಯಾಚರಣೆ ನೆಡೆಸಿ KA-19A C.7767 ಸಂಖ್ಯೆಯ ಕಂಟೇನರ್ ವಾಹನದಲ್ಲಿ ಒಂದು ಲೋಡ್ ಅಕ್ರಮವಾಗಿ ಸಾಗಿಸುತ್ತಿದ್ದ ಹವಳಿಗೆ ಬಿಲ್ಲೆಟ್ಸ್ ಮರ ವನ್ನು ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಅರ್ಜುನ್, ಮಂಜುನಾಥ್,ಕುಮಾರ್, ಉಮೇಶ್ ರವರ ತಂಡ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಈ ಕಾರ್ಯಾಚರಣೆ ಕೈಗೊಂಡು ದಾಳಿ ಸಮಯದಲ್ಲಿ ಅಕ್ರಮವಾಗಿ ಮರಸಾಗಿಸುತ್ತಿರುವುದನ್ನು ಪತ್ತೆಹಚ್ಚಿ ವಾಹನ ಸಮೇತ ವಶಪಡಿಸಿಕೊಂಡು, ಅರಣ್ಯ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!