
ಸಕಲೇಶಪುರ ತಾಲೂಕಿನ ಬಾಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದರ್ಬಾರ್ ಪೇಟೆ ಹುಲಿಯಮ್ಮ ಬಡಾವಣೆಯಲ್ಲಿ ದಿನಾಂಕ 3/7/2026 ರಂದು ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರೆವೇರಿಸಿ ಮಾತನಾಡಿದ ಶಾಸಕ ಸಿಮೆಂಟ್ ಮಂಜುನಾಥ್ ನಿರ್ಮಿತಿ ಕೇಂದ್ರ ವತಿಯಿಂದ ಸುಮಾರು 80 ಲಕ್ಷ ರೂ ಅನುದಾನವನ್ನು ಈ ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಮಿಸಲಿಡಿಸಿದ್ದು , ಈ ಗ್ರಾಮದ ಮೂಲಭೂತ ಸೌಕರ್ಯದ ಕೊರತೆ ನೀಗಿಸಲು ಶ್ರಮಿಸುವುದಾಗಿ ಹಾಗೂ ಹಕ್ಕು ಪತ್ರ, ವಿದ್ಯುತ್ ಸಮಸ್ಯೆ ಸೇರಿದಂತೆ , ಗ್ರಾಮದ ವಿವಿಧ ಕಾಮಗಾರಿಗಳಿಗೆ ಕೂಡಲೇ ಬಗೆಹರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಮೋಹನ್ ಕುಮಾರ್, ಗ್ರಾಮ ರಾಜಶ್ವ ನಿರೀಕ್ಷಕರು, ಈ ಭಾಗದ ಮುಖಂಡರಾದ ಜಯಶಂಕರ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಕೇಶ್,ಸದಸ್ಯ ರವಿ ಗ್ರಾಮದ ಎಲ್ಲಾ ಮುಖಂಡರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರೆವೇರಿಸಲಾಯಿತು.
