ವಿಧ್ಯಾರ್ಥಿ ಕಲಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ

Oplus_131072
Oplus_131072
Oplus_131072
Oplus_131072
Oplus_131072

ಬೇಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿಂದು ಜರುಗಿದ ವಿದ್ಯಾರ್ಥಿ ಕಲಾ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡು, ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು.ಹೊಸದಾಗಿ ಕಾಲೇಜು ಮೆಟ್ಟಿಲು ಹತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೇ, ವಯೋಸಹಜ ಪ್ರಭಾವಗಳಿಗೆ ಒಳಗಾಗದೇ ತಮ್ಮ ಪಿ.ಯು ಶಿಕ್ಷಣವನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಬೇಕು, ಆ ಮೂಲಕ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಹಾಗೆಯೇ, ಕಲಾ ಸಂಘ – ರಾಷ್ಟ್ರೀಯ ಸೇವಾ ಯೋಜನೆಗಳಂತಹ ಚಟುವಟಿಕೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳಬೇಕೆಂದು ಕೋರಲಾಯಿತು.

Leave a Reply

Your email address will not be published. Required fields are marked *

error: Content is protected !!