ರಾಜ್ಯ ಪೋಲೀಸ್ ಮಹಾ ನಿರ್ದೇಶಕ M. A. ಸಲೀಂ ಭೇಟಿ

Oplus_131072

ಹಾಸನ – ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಎಂ. ಎ. ಸಲೀಂ ರವರು ಹಾಸನಕ್ಕೆ ಭೇಟಿ ನೀಡಲಿದ್ದಾರೆ.ಹಾಸನಕ್ಕೆ ಆಗಮಿಸಿದ ಬಳಿಕ ಮೊದಲಿಗೆ ಪೋಲೀಸ್ ಗೌರವ ವಂದನೆ ಸ್ವೀಕರಿಸಲಿದ್ದಾರೆ. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳೊಂದಿಗೆ ಅಪರಾಧ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಿದ್ದು, ನಂತರ ಸಭೆಯಲ್ಲಿ ಜಿಲ್ಲೆಯ ವಿವಿಧ ಕಾನೂನು ಸುವ್ಯವಸ್ಥೆ, ಹಾಗೂ ಪೋಲೀಸ್ ಇಲಾಖೆಯ ಕಾರ್ಯವೈಖರಿ ಕುರಿತು ಸಮಗ್ರ ಪರಿಶೀಲನೆ ನಡೆಸಲಿದ್ದು, ಜಿಲ್ಲೆಯ ಅಪರಾಧ ನಿಯಂತ್ರಣ ತನಿಖೆ ಪ್ರಗತಿ ಹಾಗೂ ಸಾರ್ವಜನಿಕ ಸುರಕ್ಷತೆ ಸಂಬಂಧಿತ ವಿಷಯಗಳ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.ಇದಾದ ನಂತರ ಪೋಲೀಸ್ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ತರಬೇತಿ ಚಟುವಟಿಕೆ ಪರಿಶೀಲನೆ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!