08-07-2026 ರಂದು ಬೇಲೂರಿನಾದದ್ಯಾಂತ ರಜೆ ಘೋಷಣೆ

Oplus_131072

ಬೇಲೂರು ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕಳೆದ ರಾತ್ರಿ ಹಾಗೂ ಇಂದು ಬೆಳಗ್ಗೆಯಿಂದ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೇಲೂರು ತಾಲ್ಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ, ಕಸಬಾ–ಎ (A) ಹಾಗೂ ಕಸಬಾ–ಬಿ (B) ವಲಯಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದು, ನಿರಂತರ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!