


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ. ಸಿ. ರೋಡ್ ನಿಲ್ದಾಣದಲ್ಲಿ ಸಾರ್ವಜನಿಕರ ಕಣ್ಣೆದುರೇ ಅಘಾತಕಾರಿ ಹಾಗೂ ಭೀಕರ ಘಟನೆ ಸಂಭವಿಸಿದೆ. ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಮೃತ ದುರ್ದೈವಿ ಕಕ್ಕೆಪದೆವು ನಿವಾಸಿಯಾಗಿದ್ದು, (ಲಾವಣ್ಯ) ಎಂದು ಗುರುತಿಸಲಾಗಿದೆ. ಈಕೆ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಎಂದಿನಂತೆ ಮನೆಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದೆ. ಪ್ರತ್ಯೇಕ ದರ್ಶಿಗಳ ಪ್ರಕಾರ ಆಕೆ ನಿಂತಿದ್ದ ಸ್ಥಳಕ್ಕೆ ಬಂದ ಒಬ್ಬ ಯುವಕನೊಬ್ಬ ಇದ್ದಕ್ಕಿದ್ದಂತೆ ತನ್ನ ಬ್ಯಾಗಿನಿಂದ ಹರಿತವಾದ ಕತ್ತಿಯನ್ನು ಹೊರ ತೆಗೆದು ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿಯನ್ನು ತಕ್ಷಣ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆರೋಪಿ ಆಕೆಯ ದೂರದ ಸಂಬಂಧಿ ಎಂದು ಪ್ರಾಥಮಿಕ ಮೂಲಗಳ ಪ್ರಕಾರ ತಿಳಿದು ಬಂದಿದೆ.ಘಟನೆಗೆ ( One side Love) ಎಂದು ತಿಳಿದು ಬಂದಿದೆ. ಘಟನೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸಿದ್ದಾರೆ.
ನೂರಾರು ಜನರು ಓಡಾಟವಿರುವ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆ ನಡೆದಿರುವುದು ಕರಾವಳಿಯನ್ನೇ ಬೆಚ್ಚಿ ಬೀಳಿಸಿದೆ. ಮಹಿಳೆಯರ ಸುರಕ್ಷತೆ ಬಗ್ಗೆ ತೀವ್ರ ಕಳವಳ ಉಂಟಾಗಿದ್ದು, ಹಂತಕನಿಗೆ ಕಠಿಣ ಶಿಕ್ಷೆಯಾಗಲಿ ಎಂದು ನೆಟ್ಟಿಗರು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.
