
ಬೆಂಗಳೂರು – ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ICU ನಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಸರಳತೆ, ಸಜ್ಜನತೆ, ಸಹನೆ ತಾಳ್ಮೆ ಹಾಗೂ ತಮ್ಮ ಕುಟುಂಬಕ್ಕೆ ನೀಡಿರುವ ಅಚಲ ಬೆಂಬಲ ಸದಾ ಸ್ಮರಣೀಯ ದೇವೇಗೌಡರ ಯಶಸ್ವಿ ರಾಜಕಾರಣಕ್ಕೂ ಇವರು ಶಕ್ತಿಯಾಗಿ ನಿಂತಿದ್ದರು. ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ, ಸಾಮಾಜಿಕ, ಹಾಗೂ ಸಾರ್ವಜನಿಕ ವಲಯದಲ್ಲಿ ಸಂತಪದ ಅಲೆ ವ್ಯಕ್ತವಾಗಿದೆ.
