
ಸಕಲೇಶಪುರ ತಾಲೂಕಿನ ಹೆಬ್ಬಸಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಜ್ಜಿಗುಡ್ಡೆ ಮತ್ತು ಡಾಕ್ಟರ್ ಸುಧಾಕರ್ ಮನೆಕಡೆ ಹೋಗುವ ಮಾರ್ಗದ ಸಿಮೆಂಟ್ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿತು. ಈ ರಸ್ತೆಯಲ್ಲಿ ಪ್ರತಿ ದಿನ ಶಾಲೆಯ ಮಕ್ಕಳು, ರೈತರು, ಕಾರ್ಮಿಕರು, ವಾಹನಗಳು ಸಂಚರಿಸುವ ಮುಖ್ಯರಸ್ತೆಯಾಗಿದ್ದು, ರಸ್ತೆ ಸಂಪೂರ್ಣವಾಗಿ ಹಾಳಾಗಿರುವ ರಸ್ತೆ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದರು ಸಹ ಯಾವುದೇ ಪ್ರಯೋಜನವಾಗಿರುವ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಭಾಸ್ಕರ್ ಹಾನುಬಾಳು ರವರು ಸರ್ಕಾರದ ಗಮನಕ್ಕೆ ತಂದು ಸುಮಾರು 1.6 ಕಿಲೋ ಮೀಟರ್ ರಸ್ತೆಗೆ 1.30 ಕೋಟಿ ರೂ ಅನುದಾನ ಬಿಡುಗಡೆಗೊಳಿಸಿರುತ್ತಾರೆ. ಹಾನುಬಾಳು ಹೋಬಳಿ ಗ್ರಾಮ ವ್ಯಾಪ್ತಿಯ ಕೆಲವು ರಸ್ತೆಗಳಿಗೆ, ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಗೊಳಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸಿದ ಇವರನ್ನು ಸ್ಥಳೀಯ ಗ್ರಾಮಸ್ಥರು ಗೌರವಿಸಿ ಸನ್ಮಾನಿಸಿರುತ್ತಾರೆ. ಈ ಸಂದರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್ ಮತ್ತು ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷರಾದ ಡಿ.ಸಿ ಸಣ್ಣಸ್ವಾಮಿ ಹಾಗೂ ಕಾಂಗ್ರೆಸ್ ಮುಖಂಡರಾದ ತುಳಸಿ ಪ್ರಸಾದ್ ಹೆಬ್ಬಸಾಲೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ವೆಂಕಟೇಶ್ ಹೆನ್ನಲಿ, ಮಾಜಿ ಅಧ್ಯಕ್ಷರಾದ ಮಹೇಶ, ಮೇಘರಾಜು, ಹೆನ್ನಲಿ ಕೌಶಿಕ್ , ರಮೇಶ್ ಹಾರ್ಲೆಕುಡಿಗೆ, ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
