ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಮರ ಬಿದ್ದು ಸಾವು

Oplus_131072

ಆಲೂರು – ಆಲೂರು ತಾಲ್ಲೂಕಿನ ದಾಟೂರು ಗ್ರಾಮದ ನಿವಾಸಿ ನಾಗಪ್ಪ (42) ಇವರು ಗುರುಪಾದಪ್ಪ ಎಂಬುವವರ ಕಾಫಿ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಮರ ನಾಗಪ್ಪ ಅವರ ತಲೆಯ ಮೇಲೆ ಬಿದ್ದ ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಟುಂಬದ ಆಧಾರ ಸ್ತಂಭವಾಗಿದ್ದ ನಾಗಪ್ಪ ಅವರ ಅಕಾಲಿಕ ಮರಣದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕುಟುಂಬ ಅನಾಥವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಆಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!