
ನವದೆಹಲಿ – ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ನಿರಂತರವಾಗಿ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅವರು ಶನಿವಾರ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದರು ಎಂದು ಬಲ್ಲ ಮೂಲಗಳ ಪ್ರಕಾರ ತಿಳಿದು ಬಂದಿದೆ. ನೀಟ್ ಹಾಗೂ ಯುಜಿ ಸೇರಿದಂತೆ ಇತ್ತೀಚೆಗೆ ನಡೆದ ವಿವಿಧ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ದೇಶದಾದ್ಯಂತ ವಿದ್ಯಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಕಳೆದ ಕೆಲವು ವಾರಗಳಿಂದ. ಯುವ ಸಂಘಟನೆ ಹಾಗೂ ವಿದ್ಯಾರ್ಥಿಗಳು ಸಚಿವರ ರಾಜಿನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು . ಇದೀಗ ವಿದ್ಯಾರ್ಥಿಗಳ ಹೋರಾಟಕ್ಕೆ ಯಶಸ್ಸು ದೊರೆತಂತಾಗಿದೆ.
