
*ಸಕಲೇಶಪುರ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆ ವೈದ್ಯರ ತಂಡ ಮಹಿಳೆಯೊಬ್ಬರ ಹೊಟ್ಟೆಯಿಂದ ಸುಮಾರು 10 ಕೆ ಜಿ ತೂಕದ ಗೆಡ್ಡೆಯನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.*ಸಕಲೇಶಪುರ – ಆ . 6 ರಂದು ಪಟ್ಟಣದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ವೈದ್ಯರ ತಂಡವು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ ಸುಮಾರು 10 ಕೆ ಜಿ ತೂಕದ ಗೆಡ್ಡೆಯನ್ನು ಯಶಸ್ವಿಯಾಗಿ ಹೊರ ತೆಗೆದು ಮಹತ್ವದ ಸಾಧನೆ ಮಾಡಿದ್ದಾರೆ. ಪಟ್ಟಣದ ಕುಶಾಲನಗರ ಬಡಾವಣೆಯ ಹಬಿಬುನ್ನಿಸ (40) ಅವರು ಹಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೊಟ್ಟೆಯ ಗಾತ್ರ ಹೆಚ್ಚಾಗುತ್ತಿದ್ದ ಕಾರಣ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗುತ್ತಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ವೈದ್ಯಕೀಯ ತಪಾಸಣೆ ವೇಳೆ ಮಹಿಳೆಯ ಹೊಟ್ಟೆಯಲ್ಲಿ ದೊಡ್ಡ ಗೆಡ್ಡೆ ಇರುವುದನ್ನು ಪತ್ತೆ ಹಚ್ಚಿದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿಕೊಂಡು ಶಸ್ತ್ರಚಿಕಿತ್ಸೆಗೆ ಸಿದ್ಧಪಡಿಸಲಾಯಿತು.ಹಿರಿಯ ಶಸ್ತ್ರಚಿಕಿತ್ಸಕ ಡಾ. ಪುರುಷೋತ್ತಮ ಅವರ ನೇತೃತ್ವದ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಸುಮಾರು 10 ಕೆ ಜಿ ತೂಕದ ಗೆಡ್ಡೆಯನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿಯೇ ಇಂತಹ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವುದು ವೈದ್ಯರ ಪರಿಣಿತಿ ಹಾಗೂ ಆಸ್ಪತ್ರೆಯಲ್ಲಿನ ಗುಣಮಟ್ಟದ ವೈದ್ಯಕೀಯ ಸೇವೆಗೆ ಮತ್ತೊಂದು ಹೆಗ್ಗಳಿಕೆ ಯಾಗಿದ್ದು ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
