
ನವದೆಹಲಿ – ತನ್ನ ಬಾಟಲಿಯಿಂದ ನೀರು ಕುಡಿದಿದ್ದಾನೆ ಎಂದು ಮೇಲ್ಜಾತಿಯ ಶಿಕ್ಷಕನೊಬ್ಬ ದಲಿತ ಸಮುದಾಯದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ , ಜಾತಿ ನಿಂದನೆ ಮಾಡಿರುತ್ತಾನೆ. ಈ ಆರೋಪದ ಹಿನ್ನಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಮಧ್ಯಪ್ರದೇಶ ಸರ್ಕಾರ ಮತ್ತು ಪೋಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
