ಶಾಲಾ ಮಕ್ಕಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆ

ಹಾಸನ : ತಾಲೂಕಿನ ಶಾಂತಿ ಗ್ರಾಮ ಹೋಬಳಿಯ ಅಂಬುಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುಗ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆ (ನಲಿ -ಕಲಿ )ಮಕ್ಕಳಿಗೆ ಇಂದು SDMC ಅಧ್ಯಕ್ಷರ ಸಮ್ಮುಖದಲ್ಲಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲಾಯಿತು.ನಂತರ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಎಮ್ ಡಿ ರಶ್ಮಿ ಅವರು ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿ ಶಾಲಾ ಮಕ್ಕಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉಚಿತ ಶೂ ಮತ್ತು ಸಾಕ್ಸ್ ನೀಡಲಾಗುತ್ತಿದ್ದು, ಇದು ಮಕ್ಕಳಿಗೆ ತುಂಬಾ ಅನುಕೂಲವಾಗಿದೆ. ಹಳ್ಳಿಯ ಮಕ್ಕಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎoದು ಪೋಷಕರಿಗೆ ಮನವಿ ಮಾಡಿಕೊಳ್ಳುತ್ತೇನೆ ಎoದರು.ಮತ್ತು ಸರ್ಕಾರಿ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸಿ ಸರ್ಕಾರಿ ಶಾಲೆಯನ್ನು ಉಳಿಸಬೇಕೆಂದರು.ಇದೇ ಸಂದರ್ಭದಲ್ಲಿ SDMC ಅಧ್ಯಕ್ಷ ಹೇಮಂತ್ ಕುಮಾರ್, ಮುಖ್ಯ ಶಿಕ್ಷಕಿಯಾದ ಎಮ್ ಡಿ ರಶ್ಮಿ, ಹಾಗೂ ಸಹಶಿಕ್ಷಕಿ ರತ್ನಮ್ಮ,ಮತ್ತು ಶಾಲೆ ಅಡುಗೆ ಸಿಬ್ಬಂದಿಗಳು ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

error: Content is protected !!